ದೇವರವಾಣಿಯಲ್ಲಿ 8

ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.

Deuteronomy 8:1 (UKJV) All the commandments which I command you this day shall all of you observe to do, that all of you may live, and multiply, and go in and possess the land which the LORD swore unto your fathers.

1ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.

2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.

3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.

Kannada Bible (Old Version), Bible Society of India.