18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
19ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
20ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.