ಪ್ರಸಂಗಿ 1

ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.

Ecclesiastes 1:4 (UKJV) One generation passes away, and another generation comes: but the earth abides for ever.

2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.

3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?

4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.

5ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.

6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.

Kannada Bible (Old Version), Bible Society of India.