8ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
10ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
11ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
12ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.