ಪ್ರಸಂಗಿ 7

ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.

Ecclesiastes 7:3 (UKJV) Sorrow is better than laughter: for by the sadness of the countenance the heart is made better.

11 ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.

2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.

3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.

4ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.

5ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.

Kannada Bible (Old Version), Bible Society of India.