2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
4ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
5ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.
6ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.