13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
14ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).
17ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.