1ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
2ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
3ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?