2ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
3ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
6ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.