18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
21ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.
22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.