ಎಫೆಸಿಯರು 2

ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

Ephesians 2:4 (UKJV) But God, who is rich in mercy, for his great love wherewith he loved us,

2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;

3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.

4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)

6ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.

Kannada Bible (Old Version), Bible Society of India.