ಎಫೆಸಿಯರು 4

ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.

Ephesians 4:20 (UKJV) But all of you have not so learned Christ;

18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.

19ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.

20ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.

21ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.

22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.

Kannada Bible (Old Version), Bible Society of India.