21ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
23ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.