10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
11ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.
12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
13ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.