ಪುರಾತನಾದಿಕಾಂಡ 17

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.

Exodus 17:1 (UKJV) And all the congregation of the children of Israel journeyed from the wilderness of Sin, after their journeys, according to the commandment of the LORD, and pitched in Rephidim: and there was no water for the people to drink.

1ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.

2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.

3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.

Kannada Bible (Old Version), Bible Society of India.