ಪುರಾತನಾದಿಕಾಂಡ 18

ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.

Exodus 18:19 (UKJV) Hearken now unto my voice, I will give you counsel, and God shall be with you: Be you for the people toward God, that you may bring the causes unto God:

17ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;

18ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.

19ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.

20ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು.

21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

Kannada Bible (Old Version), Bible Society of India.