10ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
11ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
12ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
13ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.