11 ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
2ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
3ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
4ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.