ಪುರಾತನಾದಿಕಾಂಡ 21

ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

Exodus 21:34 (UKJV) The owner of the pit shall make it good, and give money unto the owner of them; and the dead beast shall be his.

32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

33ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ

34ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

35ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.

36ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

Kannada Bible (Old Version), Bible Society of India.