29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
30ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.
31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.