13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
17ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.