16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.
18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.