ಪುರಾತನಾದಿಕಾಂಡ 26

ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.

Exodus 26:11 (UKJV) And you shall make fifty clasps of brass, and put the clasps into the loops, and couple the tent together, that it may be one.

9ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು.

10ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು.

11ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.

12ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.

13ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.

Kannada Bible (Old Version), Bible Society of India.