28ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು.
29ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.