4ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು.
5ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು.
6ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು.
7ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
8ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.