4ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
5ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
6ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
8ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ