2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
3ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
5ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
6ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.