ಪುರಾತನಾದಿಕಾಂಡ 32

ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.

Exodus 32:33 (UKJV) And the LORD said unto Moses, Whosoever has sinned against me, him will I blot out of my book.

31ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.

32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.

33ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.

34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.

35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.

Kannada Bible (Old Version), Bible Society of India.