1ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
3ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.