1ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.