8ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
9ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
10ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
11ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
12ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.