12ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
13ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
14ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
15ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.