23ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
25ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
26ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
27ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.