1ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
2ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
3ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
4ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.