24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
25ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
26ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
28ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.