ಪುರಾತನಾದಿಕಾಂಡ 40

ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

Exodus 40:16 (UKJV) Thus did Moses: according to all that the LORD commanded him, so did he.

14ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ

15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.

16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.

Kannada Bible (Old Version), Bible Society of India.