ಪುರಾತನಾದಿಕಾಂಡ 40

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.

Exodus 40:19 (UKJV) And he spread abroad the tent over the tabernacle, and put the covering of the tent above upon it; as the LORD commanded Moses.

17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.

19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.

20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.

21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.

Kannada Bible (Old Version), Bible Society of India.