6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
8ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
9ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
10ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.