19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
20ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
22ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?
23ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.