21ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
23ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.
24ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.
25ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.