ಪುರಾತನಾದಿಕಾಂಡ 7

ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--

Exodus 7:8 (UKJV) And the LORD spoke unto Moses and unto Aaron, saying,

6ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.

7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.

8ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--

9ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.

10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.

Kannada Bible (Old Version), Bible Society of India.