7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
8ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--
9ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.