ಪುರಾತನಾದಿಕಾಂಡ 9

ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.

Exodus 9:31 (UKJV) And the flax and the barley was smitten: for the barley was in the ear, and the flax was in bud.

29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.

30ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.

31ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.

32ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.

33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.

Kannada Bible (Old Version), Bible Society of India.