3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
5ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.
6ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
7ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.