6ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
7ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
8ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
9ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು.
10ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.