ಯೆಹೆಜೆಕೇಲ್ 17

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.

Ezekiel 17:19 (UKJV) Therefore thus says the Lord GOD; As I live, surely mine oath that he has despised, and my covenant that he has broken, even it will I recompense upon his own head.

17ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.

18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.

19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.

20ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.

21ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.

Kannada Bible (Old Version), Bible Society of India.