2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
5ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,
6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;