1ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
2ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು.
3ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.