ಯೆಹೆಜೆಕೇಲ್ 2

ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.

Ezekiel 2:3 (UKJV) And he said unto me, Son of man, I send you to the children of Israel, to a rebellious nation that has rebelled against me: they and their fathers have transgressed against me, even unto this very day.

1ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.

2ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.

3ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.

4ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.

5ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.

Kannada Bible (Old Version), Bible Society of India.