ಯೆಹೆಜೆಕೇಲ್ 20

ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,

Ezekiel 20:2 (UKJV) Then came the word of the LORD unto me, saying,

1ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.

2ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,

3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.

4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.

Kannada Bible (Old Version), Bible Society of India.